ಶನಿವಾರ, ಅಕ್ಟೋಬರ್ 15, 2016

ಟಿಪ್ಪು ಜಯಂತಿಯಲ್ಲಿ ಸಾಧಕರಿಗೆ ಸನ್ಮಾನ



ಚಿಂತಾಮಣಿ: ತಾಲ್ಲೂಕು ಆಡಳಿತ, ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಗರದ ಝಾನ್ಸಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಮೈಸೂರು ಹುಲಿ ಹಜರತ್ ಟಿಪ್ಪುಸುಲ್ತಾನರವರ ೨೬೬ನೇ ಜಯಂತಿ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಮಹಮದ್ ಪುರದ ಖಲೀದ್, ವಿಚಾರವಾದಿ ಲೇಖಕಿ ಹಸೀನಾ ಬೇಗಂ, ಯುವಬರಹಗಾರ ಕೆ.ಎನ್.ಅಕ್ರಂಪಾಷ ಸೇರಿದಂತೆ ಹತ್ತಕ್ಕೂ ಹೆಚ್ಚು ಮಂದಿ ಸಾಧಕರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಲಾಯಿತು.
  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ದೀಪ್ತಿ ಆಧಿತ್ಯ ಕಾನಡೆ, ಶಾಸಕ ಜೆ.ಕೆ.ಕೃಷ್ಣಾರೆಡ್ಡಿ, ತಹಸೀಲ್ದಾರ್ ಗಂಗಪ್ಪ, ತಾ ಪಂ ಅಧ್ಯಕ್ಷೆ ಶಾಂತಮ್ಮ ವರದರಾಜು, ಉಪಾಧ್ಯಕ್ಷ ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಮಹಮದ್ ಖಲೀಲ್ ಮುಂತಾದ ಗಣ್ಯರು ಉಪಸ್ಥಿತರಿದ್ದರು.